ಪ್ರಗತಿವಾಹಿನಿ ಸುದ್ದಿ: ಹುಲಿ ದಾಳಿಗೆ ಅರಣ್ಯ ಇಲಾಖೆ ವಾಚರ್ ಬಲಿಯಾಗಿರುವ ಘಟನೆ ನಡೆದಿದೆ.
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಈ ದುರಂತ ನಡೆದಿದೆ. ಸಣ್ಣಹೈದ ಹುಲಿ ದಾಳಿಗೆ ಮೃತಪಟ್ಟಿರುವ ಅರಣ್ಯ ಇಲಾಖೆ ವಾಚರ್. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಣ್ಣಹೈದ ಕಳೆದ 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
