Kannada NewsKarnataka NewsLatestPolitics

*ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜಾತ್ರೆಯ ಹಿನ್ನೆಲೆಯಲ್ಲಿ ಬೆಕ್ಕಿನಕೇರಿ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಪರಿಶೀಲಿಸಿದರು.

ಗ್ರಾಮದಲ್ಲಿ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಅಂಗವಾಗಿ, ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ 3 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಸಚಿವರು ನಡೆಸಿದರು.

​ಇದೇ ಸಂದರ್ಭದಲ್ಲಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಭಕ್ತಾದಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಲು ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು.

Home add -Advt

ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಜಯವಂತ ಸಾವಂತ, ಮಲ್ಲಪ್ಪ ಗಾವಡೆ, ಗಜು ಮೊರೆ, ಅರುಣ ಗಾವಡೆ, ಮಹಾದೇವ್ ಬಾಂಡಗೆ, ನಾರಾಯಣ ಬಾಂಡಗೆ, ನಾರಾಯಣ ಬೊಗನ್, ಮೋಹನ್ ಪವಾರ್, ಮಹೇಂದ್ರ ಬಿರಜೆ, ಗಾವಡು ಗಾವಡೆ, ಭರಮಾ ಖಾದರವಾಡ್ಕರ್, ವಿಠ್ಠಲ ಡಿ, ಮಾರುತಿ ಖಾದರವಾಡ್ಕರ್, ಕೃಷ್ಣ ಖಾದರವಾಡ್ಕರ್ ಉಪಸ್ಥಿತರಿದ್ದರು.

Related Articles

Back to top button