Kannada NewsKarnataka NewsLatest
*ಹಾಡಹಗಲೇ ಚಿನ್ನದ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್: ಸಿಬ್ಬಂದಿಗಳಿಗೆ ಗನ್ ಇಟ್ಟು ಬೆದರಿಸಿ ಲೂಟಿ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗನ್ ಹಿಡಿದು ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಅಪಾರ ಪ್ರಮಾಣದ ಚಿನ್ನಾಭರಣ ದೋಚಿ ಪಾರಾರಿಯಾಗಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಘಟನೆ ನಡೆದಿದೆ. ಸ್ಕೈ ಗೋಲ್ಡ್ ಆಂಡ್ ಡೈಮಂಡ್ ಚಿನ್ನಾಭರಣ ಮಳಿಗೆಗೆ ಮಧ್ಯಾಹ್ನ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರ ಗ್ಯಾಂಗ್, ಸಿಬ್ಬಂದಿಗಳಿಗೆ ಗನ್ ಇಟ್ಟು ಬೆದರಿಸಿದ್ದಾರೆ ಗಾಳಿಯಲ್ಲಿ ಗುಂಡು ಹೊಡೆದು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಪೊಲೀಸರು ಮಳಿಗೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿನ್ನಾಭರಣ ಕದ್ದು ಕಳ್ಳರು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


