Kannada NewsKarnataka NewsPolitics
*ವಿಧಾನ ಪರಿಷತ್ ಚುನಾವಣೆ: 4 ಸ್ಥಾನಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನ ಪರಿಷತ್ ಗೆ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ
ಆಯ್ಕೆಯಾದ ಅಭ್ಯರ್ಥಿಗಳು
ಪಶ್ಚಿಮ ಪದವಿಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಣೆ ಮಾಡಲಾಗಿದೆ.
ಆಗ್ನೇಯ ಪದವಿಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ ಅವರು ಕಣಕ್ಕೆ ಇಳಿಯಲಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷತ್ರದಿಂದ ಶರಣಪ್ಪ ಮಟ್ಟೂರ್ ಅವರು ಚುನಾವಣೆಗೆ ಸ್ಪರ್ಧ ಮಾಡಲಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರು ಕಣಕ್ಕೆ ಇಳಿಯಲಿದ್ದಾರೆ.



