Kannada NewsKarnataka NewsLatestPolitics
*BREAKING: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂರೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನು ಕೆಲ ತಿಂಗಳ ಹಿಂದೆ ಸಿಕ್ಕಿಂನಲ್ಲಿ ಬಂಧಿಸಿದ್ದರು. ಪ್ರಕರಣದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ವೀರೇಂದ್ರ ಪ್ಪಪ್ಪಿ, ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಹೊತ್ತಲ್ಲೇ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.


