Kannada NewsKarnataka NewsLife StyleNational
*ಆದಾಯ ಮೀರಿ ಆಸ್ತಿಗಳಿಕೆ: 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ ಲೋಕಾಯುಕ್ತ ತಂಡ*

ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಯಲ್ಲಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನೌಕರ ವೆಂಕಟೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ವೆಂಕಟೇಶ್ ನಿವಾಸದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಬೆಳಿಗ್ಗೆಯಿಂದಲೂ ಲೋಕಾಯುಕ್ತ ಪೊಲೀಸರು ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.



