Kannada NewsKarnataka NewsLatest

*ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ವಿನಯ್ ಹೆಗ್ಡೆ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ವಿನಯ್ ಹೆಗ್ಡೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶಿವಭಾಗ್ ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ, ಸುಪ್ರೀಂ ಕೋರ್ಟ್ ನಿರ್ವೃತ್ತ ನ್ಯಾಯಮೂರ್ತಿ ಕೆ.ಎಸ್.ಹೆಗ್ಡೆ ಪುತ್ರ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸಹೋದರ.

Home add -Advt

ವಿನಯ್ ಹೆಗ್ಡೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ಗ್ರಾಮೀಣ ಕ್ಷೇತ್ರವಾಗಿದ್ದ ನಿಟ್ಟೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಶೈಕ್ಷಣಿಕ ಕ್ಷೇತ್ರದ ಕೇಂದ್ರ ಬಿಂದುವನ್ನಾಗಿ ಪರಿವರ್ತಿಸಿಸಿದ ಕೀರ್ತಿ ವಿನಯ್ ಹೆಗ್ಡೆ ಅವರದ್ದು.

Related Articles

Back to top button