Kannada NewsKarnataka NewsLatest

*ಕೈಕಾಲು ತೊಳೆಯಲು ಕಾಲುವೆಗೆ ಇಳಿದಿದ್ದ ಇಬ್ಬರು ಮಹಿಳೆಯರ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷದಂದೆ ಘೋರ ದುರಂತ ನಡೆದು ಹೋಗಿದೆ.‌ ಕೈಕಾಲು ತೊಳೆದುಕೊಳ್ಳಲು ಹೋಗಿ ಮಹಿಳೆಯರಿಬ್ಬರು ಕಾಲು ಜಾರಿ ಕಾಲುವೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ಘಟನೆ ನಡೆದಿದ್ದು,  ಮೃತ ಮಹಿಳೆಯರನ್ನು ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ (30) ಎಂದೂ ಗುರುತಿಸಲಾಗಿದೆ. 

ಗದ್ದೆಯಲ್ಲಿ ಭತ್ತ ಹಚ್ಚುವ ಕೂಲಿ ಕೆಲಸ ಮುಗಿಸಿಕೊಂಡು ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದರು. ಕೈಕಾಲು ತೊಳೆಯಲು ನೀರಿಗೆ ಇಳಿಯುತ್ತಿದ್ದಂತೆ ಕಾಲು ಜಾರಿದೆ ಪರಿಣಾಮ ಇಬ್ಬರೂ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

Home add -Advt

Related Articles

Back to top button