Kannada NewsKarnataka NewsLatest

*BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ: ನಾಲ್ವರು ಮಕ್ಕಳು ಸೇರಿ 6 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿ 6 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕೋಳಿಕೆರೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಬೆಳಿಗ್ಗೆ ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಇಸ್ಮಾಯಿಲ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button