Kannada NewsKarnataka NewsLatest
*ಬಳ್ಳಾರಿ ಗಲಾಟೆ ಪ್ರಕರಣ: ಜನಾರ್ಧನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬ್ಯಾನರ್ ಅಳವಡಿಸುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ಧನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವಾಲ್ಮೀಕಿ ಪಿತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಬಳ್ಳಾರಿಯ ಜನಾರ್ಧನರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ಗಲಾಟೆ ನಡೆದಿದ್ದು, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಠಾನೆಯಲ್ಲಿ ಕೇಸ್ ದಾಖಲಾಗಿದೆ.
ಶಾಸಕ ಜನಾರ್ಧನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೊತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.




