
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಫೈರಿಂಗ್ ನಡೆದಿದ್ದು ಯಾರಿಂದ, ಯಾರ ಗುಂಡೇಟಿಗೆ ವ್ಯಕ್ತಿ ಬಲಿಯಾಗಿದ್ದಾನೆ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 5 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ನಾಯಕರ ಗನ್ ಮ್ಯಾನ್ ಗಳನ್ನು ಪೊಲೀಸರು ವಿಚಾರಣೆ ನಡೆಸಿತ್ತುದ್ದಾರೆ. ಈ ಮಧ್ಯೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ದಿಯ ಖಾಸಗಿ ಗನ್ ಮ್ಯಾನ್ ಗಳೇ ಫೈರಿಂಗ್ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿವೆ. ಅಲ್ಲದೇ ಫೈರಿಂಗ್ ವಿಡಿಯೋ ಕೂಡ ವೈರಲ್ ಆಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಸತೀಶ್ ರೆಡ್ದಿಯ ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.



