Kannada NewsKarnataka NewsLatestPolitics

*ಬಳ್ಳಾರಿ ಗಲಾಟೆ ಪ್ರಕರಣ: ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಜನಾರ್ಧನ ರೆಡ್ದಿ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ದಿಬಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ್ದಾರೆ.

ಬಳ್ಳಾರಿ ಎ ಎಸ್ ಪಿ ರವಿಕುಮಾರ್, ಡಿಎಸ್ ಪಿ ಚಂದ್ರಕಾಂತ್ ನಂದಾರೆಡ್ದಿ ಹಾಗೂ ಶಾಸಕ ಭರತ್ ರೆಡ್ಡಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಜನಾರ್ಧನ ರೆಡ್ಡಿ ದೂರು ನೀಡಿದ್ದಾರೆ. ದೂರು ನೀಡಿದರೂ ಕೂಡ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನೀಡಿರುವ ದೂರಿನ ಜೊತೆ ಇದನ್ನೂ ಪರಿಗಣಿಸಲಾಗುವುದು ಎಂದು ಹಿಂಬರಹ ಕೊಟ್ಟಿದ್ದಾರೆ. ನಾನು ಕೊಟ್ಟ ದೂರು ಬೇರೆ. ಹಿಂಬರಹ ಕೊಟ್ಟಿದ್ದೇ ಬೇರೆ. ನನ್ನ ದೂರಿನ ಬಗ್ಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Home add -Advt

Related Articles

Back to top button