
ಪ್ರಗತಿವಾಹಿನಿ ಸುದ್ದಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ವರ್ಗಾವಣೆ ಮಾಡಲಾಗಿದೆ.
ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇದೀಗ ಕೇಶ್ವಾಪುರ ಪೊಲೀಸ್ ಠಾಣೆ ಇನ್ಸೆಕ್ಟರ್ ಮೇಲೆ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಇನ್ಸೆಕ್ಟರ್ ಎಸ್.ಕೆ ಹಟ್ಟಿ ಅವರನ್ನ ಕೇಶ್ವಾಪುರ ಠಾಣೆಯಿಂದ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಸದ್ಯ ಘಂಟಿಕೇರಿ ಠಾಣೆಯ ಇನ್ಸೆಕ್ಟರ್ ಜಾದವ್ಗೆ ಕೇಶ್ವಾಪುರ ಠಾಣೆ ಹೆಚ್ಚುವರಿ ಪ್ರಭಾರಿಯಾಗಿ ಜವಾಬ್ದಾರಿ ನೀಡಲಾಗಿದೆ.




