
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು 13 ಜನರು ಸಾವನ್ನಪ್ಪಿರುವ ದಾರುಣ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ದುರಂತದಲ್ಲಿ 13 ಜನರು ಮೃತಪಟ್ತಿದ್ದು, 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿಮ್ಲಾದಿಂದ ರಾಜಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಬಿದ್ದಿದೆ. ರಸ್ತೆಯಲ್ಲಿ ಭಾರಿ ಹಿಮ ಆವರಿಸಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.



