Kannada NewsKarnataka NewsLatest

*ಹಲವೆಡೆ ತುಂತುರು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ  ಮುಂದುವರಿಯುವ ಸಾಧ್ಯತೆ ಇದ್ದು.  ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶೀತಗಾಳಿ ಹೆಚ್ಚಾಗಿ ಚಳಿ ತೀವ್ರಗೊಂಡಿದೆ. ಅಲ್ಲದೆ, ಕೆಲವೆಡೆ ತುಂತುರು ಮಳೆಯೂ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಯೋವೃದ್ಧರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Home add -Advt

ಉದ್ಯಾನನಗರಿ ಬೆಂಗಳೂರಿನಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಎನ್ನದೆ ಎಲ್ಲಾ ಸಮಯದಲ್ಲೂ ಚಳಿಯ ಪ್ರಭಾವ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ನಿನ್ನೆ 14 ಡಿಗ್ರಿಗೆ ಇಳಿಕೆಯಾಗಿತ್ತು. 

ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದ‌ರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಸಹ ಅದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button