
ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಬಂಡೇಪಾಳ್ಯ ಪೊಲೀಸ್ ಠಾಣೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ 28 ವರ್ಷದ ರೌಡಿಶೀಟರ್ ಶಬ್ಬೀರ್ ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆಯ ದ್ವೇಷವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತ ಶಬ್ಬಿರ್ ತನ್ನ ಸ್ನೇಹಿತರನ್ನು ಭೇಟಿಯಾಗಲು ಮಂಗಮ್ಮನಪಾಳ್ಯಕ್ಕೆ ಬಂದಿದ್ದನು. ಈ ವೇಳೆ ಆಟೋದಲ್ಲಿ ಬಂದ ನಾಲೈದು ಮಂದಿ ದುಷ್ಕರ್ಮಿಗಳು, ಶಬೀರ್‌ನನ್ನು ಮಂಗಮ್ಮನಪಾಳ್ಯ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಬಳಿಕ ಮಂಗಮ್ಮನಪಾಳ್ಯ ಮತ್ತು ಬಂಡೇಪಾಳ್ಯ ಮುಖ್ಯರಸ್ತೆ ಜಂಕ್ಷನ್‌ನಲ್ಲಿ ಮಾರಾಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ರೌಡಿಶೀಟರ್ ನ ಕೊಲೆಯಾಗಿದೆ.
ಈ ಸಂಬಂಧ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.




