
ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಯೋಧನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್ ನ ಬಿಎಸ್ ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್ ಎಫ್ ಯೋಧ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಎಂ.ಬಿ.ಮಾದೇಗೌಡ (44) ಹೃದಯಾಘಾತಕ್ಕೆ ಬಲಿಯಾದ ಯೋಧ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದರು. ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದರು.




