Kannada NewsKarnataka NewsLatest

*ಗಾಳಿಪಟದ ಮಾಂಜಾ ದಾರದಿಂದ ದುರಂತ: ಕುತ್ತಿಗೆಗೆ ಸುತ್ತಿಕೊಂಡ ದಾರ: ಬೈಕ್ ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 32 ವರ್ಷದ ಸಂಜುಕಾಮ್ರ್ ಹೊಸಮನಿ ಮೃತ ದುರ್ದೈವಿ.

ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಮಾಂಜಾ ದಾರ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಲಗಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಬೈಕ್ ಸವಾರ ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರಕ್ಕೆ ಬಲಿಯಾಗಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button