Belagavi NewsBelgaum NewsKannada NewsKarnataka News

*ಜನನ-ಮರಣ ನೋಂದಣಿ ಕಾರ್ಯದ ಬಗ್ಗೆ ಮಹತ್ವದ ಸೂಚನೆ ನೀಡಿದ ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜನನ-ಮರಣ ದಾಖಲಾತಿಗಳು ಪ್ರತಿಯೊಬ್ಬ ಸಾರ್ವಜನಿಕರಿಗೆ ಅತೀ ಅಮೂಲ್ಯವಾದ ದಾಖಲೆಗಳಾಗಿದ್ದು ಇವುಗಳ ನೋಂದಣಿ ಕಾರ್ಯದಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ಅತೀ ಜಾಗರೂಕತೆಯಿಂದ ದಾಖಲಿಕರಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ.14) ರಂದು ಜರುಗಿದ ಜಿಲ್ಲಾ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಾರ್ಯವು ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಲು ಸಂಭಂದಿಸಿದ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದರು.

ಜನನ-ಮರಣ ನೋಂದಣಿ ದಾಖಲೆಗಳನ್ನು ಸಂರಕ್ಷಿಸಿ ನಿರ್ವಹಿಸುವದು ಅತೀ ಮುಖ್ಯವಾಗಿರುತ್ತದೆ. ನೋಂದಣಿ ಸಮಯದಲ್ಲಿ ಸರಿಯಾದ ದಾಖಲೆಗಳನ್ನು ಗಣಕೀಕರಣ ಮಾಡಬೇಕು. ಜನನ ಹಾಗೂ ಮರಣ ದಾಖಲೀಕರಣ ಸಂದರ್ಭದಲ್ಲಿ ಸಿಬ್ಬಂದಿಗಳಿಂದ ಯಾವುದೇ ತಪ್ಪುಗಳು ಆಗದಂತೆ ತರಬೇತಿ ನೀಡಬೇಕು. ಅಲ್ಲದೇ ಈ ಕುರಿತು ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳಿಗೂ ಕಾರ್ಯಾಗಾರ ಜರುಗಿಸಲು ತಿಳಿಸಿದರು.

Home add -Advt

ನೋಂದಣಿಗಾಗಿ ಸಂಗ್ರಹಿಸಲಾದ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ಭರಣಾ ಮಾಡಬೇಕು. ಮರಣ ದಾಖಲೆಗಳನ್ನು ನೋಂದಣಿ ಮಾಡುವಂತಹ ಸಂದರ್ಭದಲ್ಲಿ ಅಗತ್ಯದ ದಾಖಲೆಗಳನ್ನು ಕುಲಂಕುಷವಾಗಿ ಪರಿಶೀಲಿಸಿ ದಾಖಲೆಗಳನ್ನು ಸಂಗ್ರಹಿಸುವದರ ಜೊತೆಗೆ ಜನನ-ಮರಣ ನೋಂದಣಿ ವಹಿಗಳನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ತಿಳಿಸಿದರು.

ತಾಲೂಕು ಮಟ್ಟದಲ್ಲಿ ರಚಿಸಲಾದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯನ್ನು ನಿಯಮಿತವಾಗಿ ಜರುಗಿಸಿ ಯಾವುದೇ ಕಾರಣಕ್ಕೂ ಜನನ, ಮರಣ ನೊಂದಣಿ ಕಾರ್ಯದಲ್ಲಿ ವಿಳಂಬಕ್ಕೆ ಆಸ್ಪದ ನೀಡದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರೇಖಾ ಶೆಟ್ಟರ ಅವರು ಮಾತನಾಡಿ ಜಿಲ್ಲೆಯಲ್ಲಿ 1473 ನೋಂದಣಿ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇವುಗಳ ಪೈಕಿ 1402 ಘಟಕಗಳು ಗ್ರಾಮೀಣ ಹಾಗೂ 71 ಘಟಕಗಳು ನಗರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಡಿಸೆಂಬರ-2025ರ ಅಂತ್ಯದ ವರೆಗೆ 75879 ಜನನ ಹಾಗೂ 41347 ಮರಣ ದಾಖಲೆಗಳನ್ನು ನೋಂದಣಿ ಮಾಡಲಾಗಿರುತ್ತದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರೇಖಾ ಶೆಟ್ಟರ ಅವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ತಹಶಿಲ್ದಾರ ಬಸವರಾಜ ನಾಗರಾಳ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು, ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button