
ಪ್ರಗತಿವಾಹಿನಿ ಸುದ್ದಿ: ಇರಾನ್ ನಲ್ಲಿ ಕ್ಷಣ ಕ್ಷಣಕ್ಕೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕರು ತಕ್ಷಣ ಇರಾನ್ ತೊರೆಯುವಂತೆ ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ.
ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು, ಹಾಗೂ ಪ್ರವಾಸಿಗರು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣ ಲಭ್ಯವಿರುವ ಮಾರ್ಗಗಳ ಮೂಲಕವಾಗಿ ಇರಾನ್ ನಿಂದ ತೆರಳುವಂತೆ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರ್ದೇಶನ ನೀಡಿದೆ.
ಭಾರತೀಯ ನಾಗರಿಕರು ಪ್ರತಿಭಟನೆಗಳು ನಡೆಯುತ್ತಿರುವ ಸ್ಥಳಗಳಿಗೆ ಹೋಗಬಾರದು, ಮುಂಜಾಗೃತೆ ವಹಿಸುವಂತೆ ಸೂಚಿಸಲಾಗಿದೆ. ಭಾರತಿಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ತಿಳಿಸಿದೆ.
ಪಾಸ್ ಪೋರ್ಟ್, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳು ಸುಲಭವಾಗಿ ಲಭ್ಯವಿರುವಂತೆ ನೋಡಿಕೊಳ್ಳಿ. ಯಾವುದೇ ಸಾಹಾಯಕ್ಕಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಎಂದು ತಿಳಿಸಿದೆ.
ಇದೇ ವೇಳೆ ತುರ್ತು ಸಹಾಯವಾಣಿಯನ್ನು ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿದೆ.
+989128109115; +989128109109; +989128109102; +989932179359
e-mail cons.tehranomsa.gov.in.
ಇರಾನ್ ನಲ್ಲಿರುವ ಭಾರತೀಯರು ಈ ಲಿಂಕ್ ನಲ್ಲಿ (https://www.meaers.com/request/home) ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.



