Belagavi NewsBelgaum NewsKarnataka NewsLatest

*ರಾಜ್ಯೋತ್ಸವಕ್ಕೆ ಬಂದ ಅನುದಾನ ಸರಿಯಾಗಿ ಬಳಕೆ ಮಾಡಿ: ಡಿಸಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ರಾಜ್ಯೋತ್ಸವಕ್ಕೆ ಸರ್ಕಾರದಿಂದ ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನವನ್ನು ಸರಿಯಾಗಿ ಬಳಕೆ ಮಾಡುವಂತೆ  ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಮನವಿ ಸಲ್ಲಿಸಲಾಯಿತು.‌

ಇಂದು ಜಿಲ್ಲಾಧಿಕಾರಿಗಳಿಗೆ ಕನ್ನಡ ಸಂಘಟನೆಗಳ ಮುಖಂಡರು ಭೇಟಿಯಾಗಿ ಬೆಳಗಾವಿ ರಾಜ್ಯೋತ್ಸವಕ್ಕೆ ಸರ್ಕಾರದಿಂದ  ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನವನ್ನು ಸರಿಯಾಗಿ ಬಳಕೆ ಮಾಡುವ ಕುರಿತು ಚರ್ಚೆ ಮಾಡಿದರು.

ಈ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯನುಸಾರ ಮೂರು ಕಡೆ ಕಾರ್ಯಕ್ರಮಗಳ ಬದಲಾಗಿ ಅನುದಾನದ ಲಭ್ಯತೆ ಅನುಗುಣವಾಗಿ ಬೆಳಗಾವಿಯ ನೆಹರೂ ಕ್ರೀಡಾಂಗಣ ಮತ್ತು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಒಂದು ಕಡೆ ಕಾರ್ಯಕ್ರಮ ಮಾಡವುದಾಗಿ ಆದಷ್ಟೂ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವದಾಗಿ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಮಹಾದೇವ ತಳವಾರ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷರಾದ ಬಲರಾಮ ಮಾಸೇನಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಾಜೀದ ಹಿರೇಕುಡಿ,ಸರ್ವೋದಯ ಸೇವಾ ಸಂಘದ ಅಧ್ಯಕ್ಷರಾದ ಶ್ರೀನಿವಾಸ ತಾಳೂಕರ ಸೇರಿದಂತೆ ಇತರರು ಭಾಗವಹಿಸಿದ್ದರು.

Home add -Advt

Related Articles

Back to top button