*ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದಿಸಿ ಧಮ್ಕಿ ಹಾಕಿದ ಪ್ರಕರಣದಲ್ಲಿ ಮಹಿಳಾ ಆಯೋಗ ಎಂಟ್ರಿ*

ಪ್ರಗತಿವಾಹಿನಿ ಸುದ್ದಿ : ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದಿಸಿ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿ ಆಗಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಈ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಗೌಡಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ.
ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಿದ್ದಾರೆ.
ಇನ್ನು ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಅಮೃತಾಗೌಡ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿರುವ ರಾಜೀವ್ ಗೌಡ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಿ ಈ ಘಟನೆಯಿಂದ ನನಗೆ ಮಾನಸಿಕವಾಗಿ ತೀವ್ರ ಆಘಾತವಾಗಿದೆ. ನನ್ನ ಆತ್ಮಸ್ಥೆರ್ಯ ಕುಂದಿದೆ. ನಾನು ಒಬ್ಬಳೇ ವಾಸವಾಗಿದ್ದೇನೆ. ನನಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜೀವ್ ಗೌಡ ವಿರುದ್ಧ BNS 79, 132, 352,199, 54 ಅಡಿಯಲ್ಲಿ ದೂರು ದಾಖಲಾಗಿದೆ.



