
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕೆ.ಕೆ.ಆರ್.ಟಿ.ಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂದ ಬಸ್ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಬಸ್ ನಲ್ಲಿ ಕೆಲವೇ ಸಮಯದಲ್ಲಿ ಬೆಂಕಿ ಆವರಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ. ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



