CrimeKannada NewsKarnataka News

*ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಥಮ ಪಿಯುಸಿ ಓದುತ್ತಿದ್ದ ಇಬ್ಬರು ಯುವಕರು ಮಕರ ಸಂಕ್ರಾತಿ ರಜೆ ಹಿನ್ನಲೆಯಲ್ಲಿ ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದಾರೆ. ಆದರೆ ಕ್ವಾರಿಯಲ್ಲೆ ಮುಳಗಿ ಪ್ರಾಣ ಬಿಟ್ಟಿದ್ದಾರೆ‌.‌

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ಕಲ್ಲಿನ ಕ್ವಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಮನೋಜ್ (17) ಪ್ರಮೋದ್ ಬಡಿಗೇರ (17) ಮೃತ ಯುವಕರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಸಂಕ್ರಾಂತಿ ಹಿನ್ನೆಲೆ ಕ್ವಾರಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ತಂದೆ ಎದುರಲ್ಲೇ ಮುಳುಗಿ ಪ್ರಾಣ ಬಿಟ್ಟಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ನೀರಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇಬ್ಬರು ಯುವಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt

Related Articles

Back to top button