CrimeKannada NewsKarnataka News

*ರಾಸಾಯನಿಕ ಬಳಸಿ ಹಾಲು ತಯಾರಿಸುತ್ತಿದ್ದ ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಿಜವಾದ ಹಾಲು ಎಂದು ರಾಸಾಯನಿಕ ಮಿಶ್ರಿತ ಹಾಲು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌

ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು ಮಾಡುತ್ತಿದ್ದ ಅಡ್ಡೆ ಮೇಲೆ ಕೋಲಾರ ಜಿಲ್ಲೆಯ ಕೆಜಿಎಫ್ ಪೊಲೀಸರು ದಾಳಿ ನಡೆಸಿ, ಐವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಆಂಧ್ರ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು. ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 

ಪಾಮಾಯಲ್, ಮಿಲ್ಕ್ ಪೌಡರ್, ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪುಷ್ಟಿ ಪೌಡರ್, ಲಡ್ಡು, ಹಾಲಿನ ಕ್ಯಾನ್‍ಗಳು, ಎರಡು ಲಗೇಜ್ ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ವಸ್ತುಗಳನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button