
ಪ್ರಗತಿವಾಹಿನಿ ಸುದ್ದಿ: ಮುಂಬೈ ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣಾ ಮತ ಎಣಿಕೆ ಬೆಳಿಗ್ಗೆಯಿಂದ ಆರಂಭವಾಗಿದ್ದು, ಬಿಜೆಪಿಯ ಮಹಾಯತಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಯುಬಿಟಿ ನಡುವೆ ತೀವ್ರ ಜಿದ್ದಾ ಜಿದ್ದಿ ಏರ್ಪಟ್ಟಿದೆ.
ಮುಂಬೈ ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಆರಂಭಿಕ ಹಂತದಿಂದಲೂ ಬಿಜೆಪಿ ಮುನ್ನಡೆಯಲ್ಲಿದೆ. ಉದ್ಧವ್ ಠಾಕ್ರೆ ಯ ಯುಬಿಟಿ ಕೂಡ ಠಕ್ಕರ್ ಕೊಡುತ್ತಿದೆ.
ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 85 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಯುಬಿಟಿ 67 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 10 ಸೆನ್ ಸಿಪಿ 1 ಹಾಗೂ ಇತರೆ 5 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.




