Belagavi NewsBelgaum NewsCrimeKannada NewsKarnataka News
*ಮಾರ್ಕೇಟ್ ಪೊಲೀಸರಿಂದ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಸೆಂಟ್ರಲ್ ಬಸ್ ಸ್ಟಾಂಡ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಓಡಾಡುತಿದ್ದ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ ಆತ ಗಾಂಜಾನ ಸೇವನೆ ಮಾಡಿರುವುದು ದೃಢವಾಗಿದೆ.
ಮಹಮ್ಮದಕೈಫ ಬಸೀರಅಹ್ಮದ ಸಾವರ (23) ಎಂಬಾತನನ್ನು ವಿಚಾರಣೆ ಮಾಡಿದಾಗ ಮಾದಕ ಪದಾರ್ಥ ಸೇವನೆ ಮಾಡಿದ್ದು ಕಂಡು ಬಂದಿದೆ. ಆರೊಪಿ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.09/2026 ಕಲಂ. 27(b) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.




