
ಪ್ರಗತಿವಾಹಿನಿ ಸುದ್ದಿ: ಮುಂಬೈ ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದೆ. ಬಿಜೆಪಿ ಮಿತ್ರಕೂಟ ಭಾರಿ ಮುನ್ನಡೆ ಸಾಧಿಸಿದೆ.
ಬಿಜೆಪಿಯ ಮಹಾಯತಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಯುಬಿಟಿ ನಡುವೆ ಮತ ಎಣಿಕೆ ಆರಂಭವಾದಾಗಿನಿಂದ ತೀವ್ರ ಪೈಪೋಟಿ ನಡೆಯುತ್ತಿತ್ತು. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು, ಯುಬಿಟಿ ಎರಡನೇ ಸ್ಥಾನದಲ್ಲಿದೆ.
ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಸಾಧಿಸಿದೆ. ಬಿಜೆಪಿ-ಶಿಂಧೆ ಪಡೆಗಳ ಬಿರುಗಾಳಿಗೆ ಠಾಕ್ರೆ ಬ್ರದರ್ಸ್ ಬಣ ಧೂಳಿಪಟವಾದಂತೆ ಕಾಣುತ್ತಿದೆ. ಬಿಜೆಪಿ 122 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಯುಬಿಟಿ 70 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 13 ಸೆನ್ ಸಿಪಿ 2 ಹಾಗೂ ಇತರೆ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.




