
ಪ್ರಗತಿವಾಹಿನಿ ಸುದ್ದಿ: ಅಕ್ರಮ ವಲಸಿಗರ ಶೆಡ್ ಮೇಲೆ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರ್ತೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್.ಬೆಂಗೀಪುರದಲ್ಲಿ ಅಕ್ರಮ ವಲಸಿಗರ ಶೆಡ್ ಗಳ ಮೇಲೆ ದಾಳಿ ನಡೆಸಿ, ಅವರ ಬಳಿ ದಾಖಲೆ ಕೇಳಿದ್ದ ಹಿನ್ನೆಲೆಯಲ್ಲಿ ಜಾಗದ ಮಾಲೀಕರಿಗೆ ಅವಾಚ್ಯವಾಗಿ ನಿಂದಿಸಿದ್ದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ತೀವ್ರ ವಿಚಾರಣೆ ನಡೆಸಲಾಗುತ್ತಿದೆ.



