
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಲ ಹಿಂದೆ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಹಾಗೂ ಪುರಾತನ ವಸ್ತುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾಡಳಿತ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭಿಸಿದೆ.
ಇಂದು ಉತ್ಖನನ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದೆ. ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಕಾರ್ಯ ಆರಂಭವಾಗಿದೆ. ಎರಡನೇ ದಿನದ ಉತ್ಖನನದ ವೇಳೆ ಪುರಾತನ ವಸ್ತುವೊಂದು ಪತ್ತೆಯಾಗಿದೆ. ದೊಡ್ದ ಆಕಾರ ಪುರಾತನ ವಸ್ತುವೊಂದು ಉತ್ಖನನ ಜಾಗದಲ್ಲಿ ಪತ್ತೆಯಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈವರೆಗೆ ಉತ್ಖನನ ಜಾಗದಲ್ಲಿ 10 ಮೀಟರ್ ಅಗಲ, 10 ಮೀಟರ್ ಉದ್ದ ಅಗೆಯಲಾಗಿದೆ. ಅಷ್ಟರಲ್ಲಿಯೇ ಒಂದು ಪುರಾತನ ವಸ್ತು ಪತ್ತೆಯಾಗಿದೆ. ಇನ್ನು ಉತ್ಖನನ ನಡೆಯುವ ಸ್ಥಳವನ್ನು ನಿರ್ಬಂಧಿತ ವಲಯ ಎಂದು ಘೋಷಿಸಲಾಗಿದ್ದು, ಫೋಟೋ, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲಾಡಲಿತದಿಂದ ಅನುಮತಿ ಇದ್ದವರನ್ನು ಹೊರತುಪಡಿಸಿ ಸಾರ್ವಜನಿಕರಿಗೂ ಸ್ಥಳದಲ್ಲಿ ನಿಷೇಧ ಹೇರಲಾಗಿದೆ.



