
ಪ್ರಗತಿವಾಹಿನಿ ಸುದ್ದಿ: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ ವಾಪಸ್ ಆಗುತ್ತಿದ್ದಾಗ ಮಾಜಿ ಸಚಿವ ರಾಜು ಗೌಡ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ವಿಶಾಖಪಟ್ಟಣಂ ನಲ್ಲಿ ನಡೆದ ಸಿಸಿಎಲ್ ಪಂದ್ಯ ಮುಗಿಸಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಜು ಗೌಡ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಹಿಂಭಾಗ ಜಖಂಗೊಂಡಿದೆ.
ಅದೃಷ್ಟವಶಾತ್ ರಾಜು ಗೌಡ ಹಾಗೂ ಕಾರಿನಲ್ಲಿದ್ದ ಇತರರು ಅಪಾಯದಿಂದ ಪಾರಾಗಿದ್ದಾರೆ. ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.




