Kannada NewsKarnataka NewsLatest
*ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ*

ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ 25 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದ ಘಟನೆ ನಡೆದಿದೆ.
ಜಗದೀಶ್ ನಾಯಕ್ ಬಂಧಿತ ಅಬಕಾರಿ ಡಿಸಿ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿ ೨೫ ಲಕ್ಷ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 77 ಲಕ್ಷ ಲಂಚಕ್ಕೆ ಅಬಕಾರಿ ಡಿಸಿ ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನ ಹಣವಾಗಿ 25 ಲಕ್ಷ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.




