Belagavi NewsBelgaum NewsKannada NewsKarnataka NewsLatestSports

*ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಸಿ ಹಣ ಪಡೆಯಿರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಘ ಸಂಸ್ಥೆಗಳಿಂದ 2025-26ನೇ ಸಾಲಿನಲ್ಲಿ (ಜನವರಿ-2025 ರಿಂದ ಡಿಸೆಂಬರ-2025 ರವರೆಗೆ) ಸಂಘಟಿಸಲಾದ ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಪದಕ ವಿಜೇತ ಅಥವಾ ಅಂತರರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ/ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಜನವರಿ, 28, 2026 ರ ಒಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಜಿಲ್ಲಾ ಕ್ರೀಡಾಂಗಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0831-2474101 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ರೀಡಾಂಗಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button