Kannada NewsKarnataka NewsLatestPolitics
*ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಮಗನ ವಿರುದ್ಧ ಗಂಭೀರ ಆರೋಪ: ಸಿಎಸ್ ಗೆ ದೂರು ನೀಡಿದ ಶಾಸಕ*

ಪ್ರಗತಿವಾಹಿನಿ ಸುದ್ದಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಸಚಿವ ಆರ್.ಬಿ.ತಿಮ್ಮಪುರ ಹಾಗೂ ಪುತ್ರ ಅಧಿಕಾರಿಗಳ ಜೊತೆ ಸೇರಿ ಅಕ್ರಮವೆಸಗುತ್ತಿದ್ದಾರೆ. ಸಿಎಲ್-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಎಸ್ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದಾರೆ.
ಸಚಿವ ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ದೂರು ಆಧರಿಸಿ ಸಿಎಸ್ ಅಬಕಾರಿ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದು, ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ.


