
ಪ್ರಗತಿವಾಹಿನಿ ಸುದ್ದಿ: ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಪೆನ್ ನ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದಿದ್ದು, ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎನ್ನಲಾಗಿದೆ.
21 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಕನಿಷ್ಠ 73 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದ್ದು. ಗಂಭೀರವಾಗಿ ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



