Kannada NewsKarnataka NewsLatestPolitics
*ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಿಎಂ ಸಿದ್ದರಾಮಯ್ಯ ಒಟ್ಟಿಗೆ ಬೆಳಗಾವಿಗೆ ಪ್ರಯಾಣ ಬೆಳೆಸಿದರು.
ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಲೋಕಾರ್ಪಣೆ, ಸಮಾಧಿ ಬಳಿಯ ಕೆರೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭ ಮತ್ತು ವಿವಿಧ ಕಾಮಗಾರಿಗಳ ಭೂಮಿ ಪೂಜೆಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದರು.




