
ಪ್ರಗತಿವಾಹಿನಿ ಸುದ್ದಿ: ಹಾಸ್ಟೆಲ್ ಮಹಡಿಯ ಕೆಳಗೆ ಕಾಲೇಜು ವಿದ್ಯಾರ್ಥಿಯೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಯ ಬೈರಿಕೊಪ್ಪದಲ್ಲಿರುವ ಸನಾ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ಘತನೆ ನಡೆದಿದೆ. ಮೂರನೇ ಮಹಡಿಯ ಕೆಳಗೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಅಯಾನ್ ಸುಂಕದ್ (19) ಮೃತ ವಿದ್ಯಾರ್ಥಿ.
ಕಾಲೇಜು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ನಲ್ಲಿ ಇದ್ದ. ಅಯಾನ್ ಕೊಪ್ಪಳ ಮೂಲದವನು ಎಂದು ತಿಳಿದುಬಂದಿದೆ. ಇಂದು ಇದ್ದಕ್ಕಿದ್ದಂತೆ ಹಾಸ್ಟೆಲ್ ನಲ್ಲಿಯೇ ಶವವಾಗಿ ಪತ್ತೆಯಗೈದ್ದಾನೆ.
ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




