
ಲೋಕಾಯುಕ್ತಕ್ಕೆ ದೂರು
ಪ್ರಗತಿವಾಹಿನಿ ಸುದ್ದಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರಿಗೆ ಸಂಕಷ್ಟ ಎದುರಾಗಿದೆ. ಲಂಚದ ಆರೋಪ ಹಿನ್ನೆಲೆಯಲ್ಲಿ ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಪುತ್ರನ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದ್ದು, ಲಕ್ಷ್ಮೀನಾರಾಯಣ ಎಂಬುವವರು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಮಗನ ವಿರುದ್ಧ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ. ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಎರಡು ದಿನಗಳ ಹಿಂದೆ ಅಬಕಾರಿ ಡಿಸಿ ಜಗದೀಶ್ ಎಂಬುವವರು 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಅಬಕಾರಿ ಡಿಸಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಲಂಚದ ಹಣ ಸಚಿವರಿಗೆ, ಅವರ ಮಗನಿಗೆ ಹೋಗುತ್ತದೆ ಎಂದು ಹೇಳಿದ್ದರು. ಈ ಆಡಿಯೋ ಆಧರಿಸಿ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.



