Kannada NewsKarnataka NewsPolitics

*ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಲಿದೆ: ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್*

ಪ್ರಗತಿವಾಹಿನಿ ಸುದ್ದಿ: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಲಿವೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗಳಿಗೆ ಮಾತ್ರ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬಾರದು ಎಂಬ ಯಾವುದೇ ನಿಯಮವಿಲ್ಲ. ಹೀಗಾಗಿ, ಮುಂಬರುವ ಜಿಬಿಎ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಲಿವೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು.

ಬ್ಯಾಲೆಟ್ ಪೇಪರ್ ಬಳಕೆಗೆ ಹಲವರು ಪತ್ರ ಬರೆದಿದ್ದರೆ, ಇವಿಎಂ ಬಳಕೆಗೆ ಕೆಲವರು ಮನವಿ ಮಾಡಿದ್ದರು. ಆದರೆ, ಬ್ಯಾಲೆಟ್ ಪೇಪರ್ ಸೂಕ್ತ ಎಂದು ಆಯೋಗಕ್ಕೆ ಅನಿಸಿದೆ ಎಂದು ವಿವರಿಸಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಮೇ ಅಥವಾ ಜೂನ್‌ನಲ್ಲಿ ನಡೆಸಲು ಆಯೋಗ ಉದ್ದೇಶಿಸಿದೆ. ಆದರೆ, ಸರ್ಕಾರದಿಂದ ಡಿ-ಲಿಮಿಟೇಷನ್‌ ವರದಿ ಸಲ್ಲಿಕೆಯಾಗಬೇಕಿದೆ.

Home add -Advt

ಇದರ ಜೊತೆಗೆ, ಜನವರಿ 30ರಂದು ನ್ಯಾಯಾಲಯದಲ್ಲಿ ಈ ಸಂಬಂಧ ಒಂದು ಅರ್ಜಿ ವಿಚಾರಣೆಗೆ ಬರಲಿದ್ದು, ಅದು ಇತ್ಯರ್ಥವಾದ ನಂತರವೇ ಚುನಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಂಗ್ರೇಶ್ ಮಾಹಿತಿ ನೀಡಿದರು.

Related Articles

Back to top button