Kannada NewsKarnataka NewsLatest
*ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವು ಪ್ರಕರಣ: ಬೆಂಗಳೂರು ಸೇರಿದಂತೆ ಹಲವೆಡೆ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬಳ್ಲಾರಿ, ಕೇರಳದ ತಿರುವನಂತಪುರಂ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಬರಿಮಲೆ ದೇವಸ್ಥಾನದ 4.5 ಕೆಜಿ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಸ್ಥಳಗಳ ಮೇಲೆ ಇಡಿಯಿಂದ ದಾಳಿ ನಡೆದಿದೆ.
ಅಯ್ಯಪ್ಪ ದೇವಸ್ಥಾನದ ಹಾಗೂ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಬೆಂಗಳುರಿನ ಶ್ರೀರಾಂಪುರದಲ್ಲಿರುವ ಮನೆ, ದೇವಸ್ಥಾನದ ಟ್ರಸ್ಟಿಗಳ ಮನೆ, ಬಳ್ಳಾರಿಯ ರೊದ್ದಂ ಜ್ಯುವೆಲರಿ ಅಂಗಡಿ ಮಾಲೀಕ ಗೋವರ್ಧನ್ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 9 ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆದಿದೆ.




