
ಪ್ರಗತಿವಾಹಿನಿ ಸುದ್ದಿ: ಈ ಬಾರಿ ಶಿಕ್ಷಣ ಇಲಾಖೆ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ, ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೆ ಯಾವುದೇ ಸ್ಟಡಿ ಹಾಲಿಡೇ ಇರುವುದಿಲ್ಲ. ಮುಖ್ಯಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಪಿಯು ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ತಯಾರಿಗೆ ಪೂರ್ವಸಿದ್ಧತಾ ಪರೀಕ್ಷೆ ಬಳಿಕ ಒಂದು ತಿಂಗಳು ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಸ್ಟಡಿ ಹಾಲಿಡೆಗೆ ಬ್ರೇಕ್ ಹಾಕಲಾಗುತ್ತಿದೆ. ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಪಿಯು ಫಲಿತಾಂಶ ಸುಧಾರಣೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಇಅಲಖೆ ತಿಳಿಸಿದೆ.
ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಗ್ರೂಪ್ ಸ್ಟಡಿ ಮಾಡಿಸಬೇಕು. ಕಾಲೇಜಿನಲ್ಲಿಯೇ ವಿದ್ಯಾರ್ಥಿಗಳನ್ನು ಮುಖ್ಯಪರೀಕ್ಷೆಗೆ ತಯಾರಿ ಮಾಡಿಸಬೇಕು. ಉಪನ್ಯಾಸಕರ ನೇತೃತ್ವದಲ್ಲಿಯೇ ಪರೀಕ್ಷೆಗೆ ತಯಾರಿ ಮಾಡಬೇಕು. ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು. ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಸ್ಟಡಿ ಹಾಲಿಡೆಗೆ ಬ್ರೇಕ್ ಹಾಕಲಾಗಿ, ಫೆಬ್ರವರಿ 26ರವರೆಗೆ ಕಾಲೇಜು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.




