
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ನೂತನ ರಾಷ್ಟ್ರಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನಿತಿನ್ ನಬಿನ್ ಇಂದು ಅಧಿಕಾರ ಸ್ವೀಕರಿಸಿದರು.
ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ನಿತಿನ್ ನಬಿನ್ ಅವರನ್ನು ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ.ಲಕ್ಷ್ಮಣ್, ನಿತಿನ್ ನಬಿನ್ ಅವರಿಗೆ ಪ್ರಮಾಣಪತ್ರ ನೀಡಿದರು.




