*ವೀರಶೈವ ಮಹಾಸಭಾಕ್ಕೆ ನೂತನ ಅಧ್ಯಕ್ಷರ ಆಯ್ಕೆ* *ಹುಕ್ಕೇರಿ ಶ್ರೀ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಹಾಗೂ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧ ಆಯ್ಕೆಯಾಗಿದ್ದಾರೆ.
ಮಹಾಸಭಾದಲ್ಲಿ ನಡೆದಿರುವ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಇಂದು ಇತ್ತೀಚಿಗೆ ಲಿಂಗೈಕ್ಯರಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಗೌರವಾಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಸ್ವಾಗತ
ಬೆಳಗಾವಿ:
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿರುವುದು ಸ್ವಾಗತಾರ್ಹ ಸಂಗತಿ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಕಳೆದ 13 ವರ್ಷಗಳಿಂದ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು. ಈಗ ಅವರು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಅಭಿಮಾನದ ಸಂಗತಿ. ಅವರ ನೇತೃತ್ವದಲ್ಲಿ ಮಹಾಸಭಾ ಸಮಾಜದ ಪರವಾಗಿ ಕೆಲಸ ಮಾಡಲಿ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




