
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕುಡಚಿ ಬಸ್ ನಿಲ್ದಾಣದಲ್ಲಿ ಸ್ಥಾಪಿಸಲಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯ ಸರಕಾರ ರೂಪಿಸಿರುವ ವಿವಿಧ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡುವ ವಸ್ತುಪ್ರದರ್ಶನ ಮಳಿಗೆಗೆ ಮಂಗಳವಾರ (ಜ.20) ಕುಡಚಿ ವಿಧಾನ ಸಭಾ ಶಾಸಕರಾದ ಮಹೇಂದ್ರ ತಮ್ಮಣ್ಣವರ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ ಸರಕಾರದ ಯೋಜನೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕ ವಿಜಯಕುಮಾರ ಬೆಟಗೇರಿ ಅವರು, ವಸ್ತುಪ್ರದರ್ಶನ ಕುರಿತು ಮಾಹಿತಿ ನೀಡಿದರು.
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ ಎನ್.ಆರ್.ಹಾಜವಗೋಳ, ಗಣ್ಯರುಗಳಾದ ಮುಶೀಕ ಜಿನಾಬಡೆ, ಬಾಬಜಾನ್, ಮೊಹಮ್ಮದ ಹುಸೆನ್, ಆಸೀಫ್ ಪಟೇತ ಸೇರಿದಂತೆ ಮತ್ತಿತರು ಹಾಜರಿದ್ದರು.
ವಸ್ತುಪ್ರದರ್ಶನದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳು ಶಿಕ್ಷಣ, ಉದ್ಯೋಗ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಮತ್ತು ವಿಶೇಷ ಯೋಜನೆಗಳು; ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರದರ್ಶಿಸಲಾಗುತ್ತಿದೆ.
ಜನವರಿ 20 ರಿಂದ 22 ರವರೆಗೆ ಕುಡಚಿ ಬಸ್ ನಿಲ್ದಾಣದಲ್ಲಿ ವಸ್ತುಪ್ರದರ್ಶನ ನಡೆಯಲಿದೆ.

