Belagavi NewsBelgaum NewsKannada NewsKarnataka NewsLatestPolitics
*ಖಂಡ್ರೆ ಆಯ್ಕೆ: ಹುಕ್ಕೇರಿ ಶ್ರೀ ಸ್ವಾಗತ*

ಪ್ರಗತಿವಾಹಿನಿ ಸುದ್ದಿ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿರುವುದು ಅಭಿಮಾನದ ಸಂಗತಿ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಕಳೆದ 13 ವರ್ಷಗಳಿಂದ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು. ಈಗ ಅವರು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಅಭಿಮಾನದ ಸಂಗತಿ. ಅವರ ನೇತೃತ್ವದಲ್ಲಿ ಮಹಾಸಭಾ ಸಮಾಜದ ಪರವಾಗಿ ಕೆಲಸ ಮಾಡಲಿ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



