CrimeKannada NewsKarnataka NewsNationalPoliticsWorld
*ಬೆಂಗಳೂರಿನಲ್ಲಿ ಇರುವ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಇರುವ ಇಸ್ರೇಲ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿದ್ದಾರೆ.
ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆಯೊಂದು ಬಂದಿದೆ. ರಾಯಭಾರಿ ಕಚೇರಿಯ ಅಧಿಕಾರಿಗಳು ಇ-ಮೇಲ್ ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಬೆದರಿಕೆಯ ಮೇಲ್ ಬಂದಿರುವುದು ಗೊತ್ತಾಗಿದೆ.
ಮೇಲ್‌ನಲ್ಲಿ, ಕಚೇರಿ ಹಾಗೂ ಆವರಣದಲ್ಲಿ ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಬಾಂಬ್ ಬ್ಲಾಸ್ಟ್ ಆಗುತ್ತೆ ಎಂದು ಬರೆಯಲಾಗಿತ್ತು. ಕೂಡಲೇ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಂಬ್ ಸ್ಕ್ವಾಡ್, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಘಟನೆ ಸಂಬಂಧ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



