
ಧಗಧಗಿಸುತ್ತಿದ್ದ ಬಸ್ ನಿಂದ 36 ಪ್ರಯಾಣಿಕರನ್ನು ರಕ್ಷಿದ ಚಾಲಕ
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಜೀವದಹನಗೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಸಿರಿವೆಲ್ಲಮಟ್ಟ ಬಳಿ ಈ ದುರಂತ ಸಂಭವಿಸಿದೆ. ಹೈದರಾಬಾದ್ ನಿಂದ 36 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ನ ಟೈರ್ ಸ್ಫೋಟಗೊಂಡ ಪರಿಣಾಮ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ.
ಬಸ್ ಟೈರ್ ಸ್ಫೋಟಗೊಳ್ಳುತ್ತಿದ್ದಂತೆ ನಿಯಂತ್ರಣ ತಪ್ಪಿದ ಬಸ್ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಖಿ ಹೊಡೆದಿದೆ. ಅಪಘಾತದ ಕೆಲ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಸ್ ಚಾಲಕ, ಲಾರಿ ಚಾಲಕ, ಲಾರಿ ಕ್ಲೀನರ್ ಸ್ಥಳದಲ್ಲೇ ಬೆಂಕಿಗಾಹುತಿಯಾಗಿದ್ದಾರೆ.
ಇದೇ ಮಾರ್ಗದಲ್ಲಿ ಹಾಅದುಹೋಗುತ್ತಿದ್ದ ಇನ್ನೊಂದು ವಾಹನ ಚಾಲಕನೊಬ್ಬ ಹೊತ್ತಿ ಉರಿಯುತ್ತಿದ್ದ ಬಸ್ ನ ಕಿಟಕಿ ಗಾಜುಗಳನ್ನು ಒಡೆದು 36 ಪ್ರಯಾಣಿಕರನ್ನು ರಕ್ಷಿಸಿದ್ದಾನೆ. ಕಿಟಕಿಹಿಂದ ಜಿಗಿಯುವಾಗ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




