*ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ 1 ಕೋಟಿ ಹಣಕ್ಕೆ ಬೇಡಿಕೆ: ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿ ಬರೋಬ್ಬರಿ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.
ಬೆಂಗಳೂರು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಸ್ಪೂರ್ತಿ ಬಂಧಿತ ಮಹಿಳೆ. ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರನ್ನು ಬ್ಯಾಕ್ ಮೇಲ್ ಮಾಡಿದ್ದ ಮಹಿಳೆ 4.5 ಲಕ್ಷ ಹಣ ವಸೂಲಿ ಮಾಡಿದ್ದಳು. ಕೆಲ ದಿನಗಳ ಕಾಲ ಸುಮ್ಮನಿದ್ದ ಮಹಿಳೆ ಮತ್ತೆ ಪದೇ ಪದೇ ಸ್ವಾಮೀಜಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಳು. ಅಲ್ಲದೇ 1 ಕೋಟಿ ರೂಪಾಯಿ ಹಣ ನೀಡುವಂತೆ ಬೇದಿಕೆ ಇಟ್ಟಿದ್ದಳು.
ಮಹಿಳೆಯ ಬ್ಲ್ಯಾಕ್ ಮೇಲ್ ಕಾಟಕ್ಕೆ ಬೇಸತ್ತ ಸ್ವಾಮೀಜಿ ಬೆಂಗಳೂರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರ್ಫ್ಪಿ ಮಹಿಳೆಯನ್ನು ಬಂಧಿಸಿದ್ದಾರೆ. ಇನ್ನು ಮಹಿಳೆಯಿಂದ 4.5 ಲಕ್ಷ ಹಣ ಕಳೆದುಕೊಂಡಿರುವ ಇದೇ ಸ್ವಾಮೀಜಿ ಮೇಲೆಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನವೂ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಆರೋಪಿಗಳು 6 ಕೋಟಿಗೆ ಬೇದಿಕೆ ಇಟ್ಟಿದ್ದರು. ಈ ಕೇಸ್ ನಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದರು.




