Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮಹಿಳಾ ಮೋರ್ಚಾ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಮುಖಂಡ ರಾಜೀವಗೌಡ ಬಂಧನ ಹಾಗೂ ಡಿಜಿಪಿ ರಾಮಚಂದ್ರ ರಾವ್ ವಜಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. 

ಗುರುವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರತೀಯ ಜನತಾ ಪಕ್ಷದ ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಯಿತು. 

ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಾದ್ರೂ ಬಂಧನವಾಗಿಲ್ಲ. ಈ ಕೂಡಲೇ ರಾಜೀವಗೌಡನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಡಿಐಜಿಪಿ ರಾಮಚಂದ್ರರಾವ್ ವಜಾ ಮಾಡಬೇಕೆಂದು ಒತ್ತಾಯಿಸಲಾಯಿತು. 

ಕಚೇರಿಗೆ ಆಗಮಿಸಿದ ಅಮಾಯಕ ಮಹಿಳೆಯರ ಜೊತೆಗೆ ಅಸಭ್ಯ ವರ್ತನೆ ತೋರಿದ್ದಾರೆ. ತಕ್ಷಣವೇ ರಾಮಚಂದ್ರರಾವ್  ಕೆಲಸದಿಂದ ವಜಾ ಮಾಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Home add -Advt

Related Articles

Back to top button