CrimeKannada NewsKarnataka News

*ಪುನೀತ್ ಕೆರೆಹಳ್ಳಿ ಮತ್ತೆ ಬಂಧನ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಹಚ್ಚಲು ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಆ ಪ್ರದೇಶಕ್ಕೆ ತೆರಳಿ, ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಈ ವೇಳೆ ಹಸನ್ ಎಂಬಾತನನ್ನು ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾರೆ. 

ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆಯೇ ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿಯ ವಿರುದ್ಧ ಈ ಮೊದಲೇ ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಅವರಿಗೆ ಹಲವು ಬಾರಿ ಪೊಲೀಸರು ನೋಟಿಸ್ ನೀಡಿದ್ದರೂ ಕೂಡಾ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಬಾಗಲಗುಂಟೆ ಠಾಣೆಯ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

Home add -Advt

Related Articles

Back to top button